ಹೊಸಪೇಟೆ: ರಾಜ್ಯದ ಎಲ್ಲಾ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮತ್ತು ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಪ್ರಸಕ್ತ ವರ್ಷದಿಂದ ರಾಜ್ಯದಲ್ಲಿನ 4,300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಉರ್ದು ಹಾಗೂ ತೃತೀಯ ಭಾಷೆ ಇಂಗ್ಲಿಷ್ ಅನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
