BIG NEWS:‌ ನಾಮಫಲಕಗಳಲ್ಲಿ ʼಕನ್ನಡʼ ಭಾಷೆ ಕಡ್ಡಾಯ; ಇಲ್ಲದಿದ್ದರೆ ಕಾನೂನು ಕ್ರಮ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ರೀತಿಯ ಉದ್ದಿಮೆದಾರರು ತಮ್ಮ ತಮ್ಮ ಜಾಹೀರಾತು ಅಥವಾ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಪಾಲಿಕೆಯ ಆಯುಕ್ತ ಜಿ. ಖಲೀಲ್‍ಸಾಬ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ನಿರ್ದೇಶಾನುಸಾರ ರಾಜ್ಯದೆಲ್ಲೆಡೆ ಕನ್ನಡ ಭಾಷೆಗೆ ಆದ್ಯತೆ ನೀಡಲು ಹಾಗೂ ಕನ್ನಡ ಭಾಷೆಯನ್ನು ಆದ್ಯತೆ ಮೇರೆಗೆ ಬಳಸುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಅಕ್ಟೋಬರ್ 30ರೊಳಗಾಗಿ ಜಾಹೀರಾತು ಅಥವಾ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಹಾಗೂ ಹೋಟೇಲ್/ರೆಸ್ಟೋರೆಂಟ್ ಅಥವಾ ಆಹಾರ ಸರಬರಾಜು ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಮೆನುಕಾರ್ಡ್ ಬಳಸಲೂ ಸೂಚಿಸಲಾಗಿದೆ. ಉಲ್ಲಂಘಿಸಿದ್ದಲ್ಲಿ ನಿಯಾಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read