HomeKarnatakaBREAKING : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ 'ಕೇಂದ್ರ ಸಾಹಿತ್ಯ ಅಕಾಡೆಮಿ' ಪ್ರಶಸ್ತಿ...

BREAKING : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ |K.V Narayana

ಬೆಂಗಳೂರು : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಕನ್ನಡದ ಖ್ಯಾತ ವಿಮರ್ಶಕರು, ಭಾಷಾ ವಿದ್ವಾಂಸರೂ ಆಗಿರುವ ಪ್ರೊ.ಕೆ.ವಿ.ನಾರಾಯಣ ಅವರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಅವರ ‘ನುಡಿಗಳ ಅಳಿವು’ ವಿಮರ್ಶಾ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ಗೌರವ ತಂದಂತಾಗಿದೆ.

ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ನವದೆಹಲಿಯಲ್ಲಿ ಮಾರ್ಚ್ 8 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ. ಕೆ.ವಿ ನಾರಾಯಣ ಅವರು ಮೂಲತಹ ಪಿರಿಯಾಪಟ್ಟಣದ ಕಂಪಲಾಪುರದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular