BIG NEWS: ಕೆಜೆಪಿ ಕಟ್ಟಿದಾಗ ನಿಮ್ಮ ಸಿದ್ಧಾಂತ ಎಲ್ಲಿ ಹೋಗಿತ್ತು…? ಯಡಿಯೂರಪ್ಪಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್; ನೈತಿಕತೆ ಪ್ರಶ್ನಿಸಿದ ಬಿಜೆಪಿ ನಾಯಕರಿಗೂ ತಿರುಗೇಟು

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಶೆಟ್ಟರ್ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ಹೆಣೆಯಲಾಗಿದೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ನಿಮ್ಮ ಟೀಕೆಗಳೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಸಭೆಯ ಮೇಲೆ ಸಭೆ ನಡೆಸುತ್ತಿದ್ದಾರೆ. ಹಲವು ನಾಯಕರನ್ನು ಕರೆ ತರುತ್ತಿದ್ದಾರೆ. ಯಾರೆ ಬಂದರೂ ನಾನು ಭಯ ಪಡುವ ಪ್ರಶ್ನೆಯೇ ಇಲ್ಲ. ನನಗೆ ತತ್ವ ಸಿದ್ಧಾಂತಗಳ ಬಗ್ಗೆ ಮಾತನಾಡುವ ಯಡಿಯೂರಪ್ಪನವರಿಗೆ ಕೆಜೆಪಿ ಕಟ್ಟಿದಾಗ ನಿಮ್ಮ ತತ್ವ, ಸಿದ್ಧಾಂತ ಎಲ್ಲಿ ಹೋಗಿತ್ತು ಎಂದು ಕೇಳುತ್ತೇನೆ ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ನನಗೆ ನೈತಿಕತೆ ಇಲ್ಲ ಎಂದು ಹೆಳುವ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಸಿಡಿ ಸ್ಟೇ ತಂದ ಮಂತ್ರಿಗಳಿಗೆ ಟಿಕೆಟ್ ಕೊಟ್ಟಿದ್ದೀರಾ. ತತ್ವ, ಸಿದ್ಧಾಂತಗಳು, ನೈತಿಕತೆಗಳು ಇಲ್ಲಿ ಅನ್ವಯಿಸಲ್ವಾ? 6-7 ಮಂತ್ರಿಗಳು ಸಿಡಿ ಕೇಸ್ ನಲ್ಲಿ ಸ್ಟೇ ತಂದಿದ್ದಾರೆ. ಕೋರ್ಟ್ ನಿಂದ ಸ್ಟೇ ತಂದವರಿಗೆ ಟಿಕೆಟ್ ಕೊಡಲಾಗಿದೆ. 80 ಕ್ರಿಮಿನಲ್ ಕೇಸ್ ಇದ್ದವರಿಗೆ ಟಿಕೆಟ್ ಕೊಟ್ಟಿದ್ದಾರೆ ಇದು ಯಾವ ನೈತಿಕತೆ ? ಸುಮ್ಮನೆ ಬಡಪಾಯಿ ಶೆಟ್ಟರ್ ಮೇಲೆ ಯಾಕೆ ಅಟ್ಯಾಕ್ ಮಾಡ್ತೀರಾ ? ಎಂದು ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read