BIG NEWS : ʻKPTCLʼ 404 ಎಇ ನೇಮಕಾತಿ : ಹೈಕೋರ್ಟ್ ನಿಂದ ಮಹತ್ವದ ಆದೇಶ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಹೈಕೋರ್ಟ್‌ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿನ 404 ಸಹಾಯಕ ಅಭಿಯಂತರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಕೆಪಿಟಿಸಿಎಸ್‌ ನಲ್ಲಿನ 404 ಹುದ್ದೆಗಳ ನೆಮಕಾತಿ ಸಂಬಂದ ೨೦೨೩ ರ ಫೆಬ್ರವರಿ 4 ರಂದು ಪ್ರಕಟಿಸಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ  ನ್ಯಾಯಮೂರ್ತಿ ಪಿ.ಎಸ್.‌ ದಿನೇಶ್‌ ಕುಮಾರ್‌ ಹಾಗೂ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದೆ.

ವಿಚಾರಣೆ ಬಳಿಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದ್ದು, 2023 ರ ಜನವರಿ 3 ರಂದು ಪ್ರಕಟಿಸಿದ್ದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಅಂಕ ಪಟ್ಟಿಯಂತೆ 404 ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶಗಳನ್ನು ನೀಡುವಂತೆ ಕೆಪಿಟಿಸಿಎಸ್‌ ಗೆ ನಿರ್ದೇಶನ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read