BIG NEWS : ʻKSRTCʼ ಅಪಘಾತ ಪರಿಹಾರ 10 ಲಕ್ಷ ರೂ.ಗೆ ಹೆಚ್ಚಳ : ಜನವರಿ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

₹ 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. ₹ 50ರಿಂದ ₹ 100ರ ವರೆಗಿನ ಮುಖ ಬೆಲೆ ಟಿಕೆಟ್‌ಗೆ ₹ 1 ಹಾಗೂ ₹ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ ₹ 2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.

ಪ್ರಸ್ತುತ ಪಾವತಿಸುತ್ತಿರುವ ಪರಿಹಾರ ಮೊತ್ತವನ್ನು ದಿನಾಂಕ:01.03.2017 ರಿಂದ ಪಾವತಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚರ್ಚಿಸಿ, ಪರಿಹಾರ ಮೊತ್ತವನ್ನು ದಿನಾಂಕ 31.10.2023 ರಂದು ಜರುಗಿದ 29ನೇ ಅಪಘಾತ ಪರಿಹಾರ ನಿಧಿ ಸಭೆಯಲ್ಲಿ 3,00,000 ರೂ.ದಿಂದ  10 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read