HomeKarnatakaBIG NEWS : ರಾಜ್ಯದಲ್ಲಿ ಮತ್ತೆ 'KSRTC' ಬಸ್ ಟಿಕೆಟ್ ದರ ಹೆಚ್ಚಳ..? ; ಸುಳಿವು...

BIG NEWS : ರಾಜ್ಯದಲ್ಲಿ ಮತ್ತೆ ‘KSRTC’ ಬಸ್ ಟಿಕೆಟ್ ದರ ಹೆಚ್ಚಳ..? ; ಸುಳಿವು ನೀಡಿದ ಸಾರಿಗೆ ಸಚಿವರು..!

ಬೆಂಗಳೂರು : ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ತೈಲ ಬೆಲೆ ಏರಿಕೆಯಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. 2020 ರಿಂದ ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ.ಡೀಸೆಲ್ ದರ ಹೆಚ್ಚಳದ ಹಿನ್ನೆಲೆ ಟಿಕೆಟ್ ಬೆಲೆ ಹೆಚ್ಚಳಕ್ಕೆ ಚಿಂತನೆ ನಡೆಸಿದ್ದೇವೆ. ನಿಗಮಗಳಿಂದ ಬೆಲೆ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ತೈಲ ಬೆಲೆ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ.

ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular