HomeLatest NewsBIG NEWS: 70 ಕೆರೆಗಳನ್ನು ತುಂಬಿಸುವ ‘ವೃಷಭಾವತಿ ಏತ ನೀರಾವರಿ ಯೋಜನೆ’ಗೆ ಚಾಲನೆ

BIG NEWS: 70 ಕೆರೆಗಳನ್ನು ತುಂಬಿಸುವ ‘ವೃಷಭಾವತಿ ಏತ ನೀರಾವರಿ ಯೋಜನೆ’ಗೆ ಚಾಲನೆ

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 263 ಎಂಎಲ್‌ಡಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿರುವ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ನೆಲಮಂಗಲದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.

ನೆಲಮಂಗಲ ತಾಲೂಕು ಕಣ್ಣೇಗೌಡನಹಳ್ಳಿ ಗ್ರಾಮದ ಕೆರೆಯಲ್ಲಿ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ನಂತರ ಬಸವನಹಳ್ಳಿ ಸಮೀಪ 70 ಕೆರೆಗಳಿಗೆ ನೀರು ತುಂಬಿಸುವ ವೃಷಭಾವತಿ ವ್ಯಾಲಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ವೃಷಭಾವತಿ ನೀರನ್ನು ಬಹಳ ಹಿಂದೆಯೇ ಸಂಸ್ಕರಣೆ ಮಾಡಿ ಹರಿಸಲು ನಿರ್ಧರಿಸಿದ್ದೆವು. ವೃಷಭಾವತಿ ಯೋಜನೆ 1081 ಕೋಟಿ ರೂಪಾಯಿ ವೆಚ್ಚದ 259 ಕೆರೆಗಳಿಗೆ ನೀರು ಒದಗಿಸುವ ಯೋಜನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತರ್ಜಲ ಮಟ್ಟ ಹೆಚ್ಚಿಸಿ, ಕೈಗಾರಿಕೆ, ಕೃಷಿಗೆ ವೃಷಭಾವತಿ ಸಂಸ್ಕರಿಸಿದ ನೀರು ದೊಡ್ಡ ಕೊಡುಗೆ ನೀಡುತ್ತದೆ. ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆಗೆ ಎರಡನೇ ಹಾಗೂ ಮೂರನೇ ಹಂತದಲ್ಲಿ ಕೆರೆಗಳನ್ನು ತುಂಬಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular