HomeLatest NewsBIG NEWS: ಅಧಿವೇಶನಕ್ಕೆ ಬರದಿದ್ದರೆ ರಾಜ್ಯಪಾಲರ ವಿರುದ್ಧ ಕಾನೂನು ಸಮರ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ...

BIG NEWS: ಅಧಿವೇಶನಕ್ಕೆ ಬರದಿದ್ದರೆ ರಾಜ್ಯಪಾಲರ ವಿರುದ್ಧ ಕಾನೂನು ಸಮರ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ನಿರ್ಧಾರ

ಬೆಂಗಳೂರು: ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲು ಬರದಿದ್ದರೆ ಅವರ ವಿರುದ್ಧ ಕಾನೂನು ಸಮರಕ್ಕೆ ಸರ್ಕಾರ ಮುಂದಾಗಿದೆ.

ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ದೆಹಲಿಗೆ ತೆರಳಿದ್ದಾರೆ. ರಾಜ್ಯಪಾಲರು ಅಧಿವೇಶನಕ್ಕೆ ಬರದಿದ್ದರೆ, ಸುಪ್ರೀಂ ಕೋರ್ಟ್ ಸಿಜೆ ಮುಂದೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಲಹೆಯಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು.

ಎರಡು ಪ್ರಮುಖ ಅಂಶಗಳ ಮೇಲೆ ಗವರ್ನರ್ ಗೆ ನಿರ್ದೇಶನ ನೀಡಲು ಅರ್ಜಿ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ.  ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಸದನದಲ್ಲಿ ರಾಜ್ಯಪಾಲರು ಓದಬೇಕು. ಅವರ ಕರ್ತವ್ಯವನ್ನು ರಾಜ್ಯಪಾಲರು ಪಾಲಿಸಬೇಕು. ಅವರು ಭಾಷಣ ಓದಲು ಬರದಿದ್ದರೆ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಿ ಅವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಇಂದು ಬೆಳಗ್ಗೆ 11,15 ರವರೆಗೆ ಕಾದು ನೋಡಿ ರಾಜ್ಯಪಾಲರು ಸದನಕ್ಕೆ ಬರದಿದ್ದರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular