HomeKarnatakaBIG NEWS: ರಾಜ್ಯದಲ್ಲಿ ಎಸ್ಐಆರ್ ಹಿನ್ನೆಲೆ ಆಗಸ್ಟ್ ನಲ್ಲಿ ವಿಧಾನಮಂಡಲ ಮುಂಗಾರು ಅಧಿವೇಶನ

BIG NEWS: ರಾಜ್ಯದಲ್ಲಿ ಎಸ್ಐಆರ್ ಹಿನ್ನೆಲೆ ಆಗಸ್ಟ್ ನಲ್ಲಿ ವಿಧಾನಮಂಡಲ ಮುಂಗಾರು ಅಧಿವೇಶನ

ಬೆಂಗಳೂರು: ಈ ಬಾರಿ ಆಗಸ್ಟ್ ನಲ್ಲಿ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ವಾಡಿಕೆಯಂತೆ ಜುಲೈನಲ್ಲಿ ನಡೆಯಬೇಕಿದ್ದ ಮಳೆಗಾಲದ ವಿಧಾನ ಮಂಡಲ ಅಧಿವೇಶನವನ್ನು ಆಗಸ್ಟ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾರ ವಿಧಾನ ಮಂಡಲ ಅಧಿವೇಶನ ದಿನಾಂಕ ನಿಗದಿ ಮಾಡಲಾಗುವುದು. ನಂತರ ದಿನಾಂಕ ಪ್ರಕಟಿಸಲಾಗುವುದು ಎಂದು ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

ಜುಲೈ ತಿಂಗಳಲ್ಲಿ ಮುಂಗಾರು ಅಧಿವೇಶನ ಕರೆಯಬೇಕಿತ್ತು. ಎಸ್ಐಆರ್ ನಡಿಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಗಿಯುವರೆಗೂ ಕಾಯಲು ತೀರ್ಮಾನಿಸಲಾಗಿದೆ. ಎಸ್ಐಆರ್ ಮುಗಿದ ಬಳಿಕ ವಿಧಾನಸಭೆ ಅಧ್ಯಕ್ಷರ ಚುನಾವಣೆ ಬಗ್ಗೆಯೂ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular