BIG NEWS : ರಾಜ್ಯದ 1 -10ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ವಾರಕ್ಕೊಂದು ‘ಗ್ರಂಥಾಲಯ ಅವಧಿ ಅನುಷ್ಟಾನ’ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ 01 ರಿಂದ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ “ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮದಡಿ ಕಡ್ಡಾಯವಾಗಿ ವಾರಕ್ಕೊಂದು ಗ್ರಂಥಾಲಯ ಅವಧಿಯನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವೃದ್ಧಿಸುವ ಸಲುವಾಗಿ ಪ್ರತಿ ಶಾಲೆಯಲ್ಲಿಯೂ ಕಡ್ಡಾಯವಾಗಿ ಗ್ರಂಥಾಲಯವನ್ನು ಸ್ಥಾಪಿಸಿ ಅಭಿವೃದ್ಧಿ ಪಡಿಸಲು ಮತ್ತು ಅದನ್ನು ಮಕ್ಕಳ ಬಳಕೆಗೆ ಅರ್ಹವಾಗಿಸಿ ನಿರಂತರ ಬಳಕೆಗೆ ನೀಡಲು ಉಲ್ಲೇಖದನುಸಾರ ಶಾಲೆಗಳಲ್ಲಿ ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮವನ್ನು ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಾಲೆಗಳಲ್ಲಿ ವಾರಕ್ಕೆ ಒಂದು ಗ್ರಂಥಾಲಯ ಅವಧಿ ನಿಗಧಿಪಡಿಸಲು ಕ್ರಮವಹಿಸಲಾಗಿದೆ.

ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದ ಧೈಯವಾಗಿದ್ದು, ವಿದ್ಯಾರ್ಥಿಗಳ ಜ್ಞಾನ, ಬುದ್ದಿ ಮತ್ತು ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯಕವಾಗಿರುತ್ತದೆ. ಪುಸ್ತಕ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಶಾಲಾ ಗ್ರಂಥಾಲಯಗಳು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಗ್ರಂಥಾಲಯಗಳು ಜ್ಞಾನಭಂಡಾರ ಅಷ್ಟೇ ಅಲ್ಲ ಬದಲಿಗೆ ವಿದ್ಯಾರ್ಥಿಗಳ ಸಂಪೂರ್ಣ ಮನೋವಿಕಾಸಕ್ಕೆ ಪೂರಕವಾಗಿರುತ್ತವೆ.

ಶಾಲಾ ಗ್ರಂಥಾಲಯದ ಪ್ರಾಥಮಿಕ ಉದ್ದೇಶವು ಮಕ್ಕಳಲ್ಲಿ ಓದುವ ಅಭ್ಯಾಸವನ್ನು ಬೆಳೆಸುವುದು. ಮಕ್ಕಳು ಆನಂದಿಂದ ಪುಸ್ತಕಗಳನ್ನು ಓದಿದಾಗ ಮಾತ್ರ ಈ ಹವ್ಯಾಸವು ಬೆಳೆಯಲು ಸಾಧ್ಯ. ಮಕ್ಕಳು ಆನಂದಿಸಿ ಓದಲು ಗ್ರಂಥಾಲಯದಲ್ಲಿ ಅನೇಕ ಪ್ರಕಾರದ, ಆಕರ್ಶಕ ಪುಸ್ತಕಗಳಿರಬೇಕು. ಈ ಪುಸ್ತಕಗಳು ಮಕ್ಕಳ ಅಭಿರುಚಿಗೆ ತಕ್ಕಂತಿರಬೇಕು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದಭಂಡಾರ ವೃದ್ಧಿಸಿ, ನಿರರ್ಗಳತೆ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿವೆ. ಅದಲ್ಲದೆ ಬೌದ್ಧಿಕ ಕೌಶಲ್ಯಗಳಾದ ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣಾತ್ಮಕ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆ, ಹಾಗೂ ಸಹಾನುಭೂತಿಯನ್ನು ಬೆಳೆಸುತ್ತದೆ.

ಮೇಲ್ಕಂಡ ಉದ್ದೇಶದ ಗುರಿಯನ್ನು ಸಾಧಿಸಲು ಇಲಾಖೆಯಿಂದ “ಓದುವ ಹವ್ಯಾಸ ಜ್ಞಾನದ ವಿಕಾಸ ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಸದರಿ ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಮಾರ್ಗದರ್ಶಿಯನ್ನು ಪಾಲಿಸಬೇಕೆಂದು ಶಾಲೆಗಳಿಗೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read