ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.
ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ. ಮೀಸಲಾತಿ ಪ್ರಕಟಿಸದಿದ್ದರೆ ಹಾಲಿ ರೋಸ್ಟರ್ ಪ್ರಕಾರವೇ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಎಚ್ಚರಿಕೆ ನೀಡಿದೆ. ವಿಚಾರಣೆಯನ್ನು ಸೆ. 11ಕ್ಕೆ ನಿಗದಿಪಡಿಸಲಾಗಿದೆ.