BIG NEWS : ರಾಜ್ಯದ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ  ತರಬೇತಿ ನೀಡಲಾಗುವುದು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ ಎಂದರು.

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read