HomeKarnatakaBIG NEWS : ಕರ್ನಾಟಕದ ಜನತೆಗೆ ಕಾದಿದೆ ಮಾರಿ ಹಬ್ಬ : ಬಜೆಟ್ ಬಗ್ಗೆ ಆರ್.ಅಶೋಕ್...

BIG NEWS : ಕರ್ನಾಟಕದ ಜನತೆಗೆ ಕಾದಿದೆ ಮಾರಿ ಹಬ್ಬ : ಬಜೆಟ್ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯೆ.!

ಬೆಂಗಳೂರು : ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡಕಸುಬಿ ಬಜೆಟ್. ಸಿದ್ದರಾಮಯ್ಯನವರು Outgoing CM ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿರುವುದರಿಂದ, ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ ಎಂದು ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಏನೂ ಇಲ್ಲ….ಸಾಲ ಹೆಚ್ಚಾಗಿದೆ…ಕರ್ನಾಟಕದ ಜನತೆಗೆ ಮಾರಿ ಹಬ್ಬ ಕಾದಿದೆ ಎಂದು ವಿಧಾನಸೌಧದಲ್ಲಿ ಬಜೆಟ್ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಕಡೆಯ ಬಜೆಟ್ ನಲ್ಲಿ ಒಂದಿಷ್ಟಾದರೂ ಜನಪರ ಯೋಜನೆಗಳನ್ನ ಘೋಷಿಸುತ್ತಾರೆ ಎಂದು ಎದುರು ನೋಡುತ್ತಿದ್ದ ಜನರಿಗೆ ಈ ಬಜೆಟ್ ಸಂಪೂರ್ಣ ನಿರಾಸೆ ಮೂಡಿಸಿದೆ. ಇದು ಕೇವಲ ‘ಬೊಗಳೆರಾಮಯ್ಯ ಬಜೆಟ್’. ಸಾಧನೆಯ ಬಲದಿಂದಾಗಲಿ, ದಿಟ್ಟ ನಾಯಕತ್ವದಿಂದಾಗಲಿ, ಅಹಿಂದ ನಾಮ ಜಪದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ
@INCKarnatakaಪಕ್ಷ ಅಧಿಕಾರಕ್ಕೆ ಬಂತು. ಈ ಗ್ಯಾರೆಂಟಿಗಳು ಬಡವರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಜನರನ್ನ ದಿಕ್ಕು ತಪ್ಪಿಸಿ, ಮತಗಳಿಸಿ ಅಧಿಕಾರಕ್ಕೆ ಏರುವುದು ಮಾತ್ರ ಆಗಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಬಿಸಿ ತುಪ್ಪದಂತಾಗಿರುವ ಗ್ಯಾರೆಂಟಿಗಳನ್ನು ಮುಂದುವರೆಸಲು ಆಗದೆ ನಿಲ್ಲಿಸಲೂ ಆಗದೆ ಕಾಂಗ್ರೆಸ್ ಸರ್ಕಾರ ಅಡಕತ್ತರಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕೆಡಿಪಿ ಅಂಕಿ-ಅಂಶದ ಪ್ರಕಾರ, ಕಳೆದ ವರ್ಷದ ಅಂದರೆ 2024-25 ನೇ ಬಜೆಟ್ ವರ್ಷದ 10 ತಿಂಗಳಲ್ಲಿ ಶೇ.62% ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವರ್ಷದ ಅನುದಾನವೇ ಖರ್ಚು ಆಗದೆ ಇರುವಾಗ ಈಗ ಇನ್ನೊಂದು ಬಜೆಟ್ ಮಂಡಿಸಿದರೆ ಪ್ರಯೋಜನವೇನು? ಐದನೇ ಕ್ಲಾಸು ಪಾಸಾಗದ ವಿದ್ಯಾರ್ಥಿ ಆರನೇ ಕ್ಲಾಸಿನ ಪರೀಕ್ಷೆಗೆ ಕಟ್ಟಿದರೆ ಏನು ಪ್ರಯೋಜನ? ಹಾಗಾಗಿದೆ ಸಿದ್ದರಾಮಯ್ಯ ನವರ ಬಜೆಟ್ ನ ಕಥೆ-ವ್ಯಥೆ. ಇದು ಕೇವಲ ನಾಮಕಾವಸ್ತೆ ಬಜೆಟ್. ಪಾಪರ್ ಸರ್ಕಾರದ ಪಾಪರ್ ಬಜೆಟ್. ನಿವೃತ್ತಿ ಆಗುತ್ತಿರುವ ಮುಖ್ಯಮಂತ್ರಿಗಳ ನಿರ್ಗಮನದ ಬಜೆಟ್. ಇದರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ನಯಾಪೈಸೆ ಉಪಯೋಗವಿಲ್ಲ ಎಂದಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular