BIG NEWS : ಮಂಡ್ಯದಲ್ಲಿ ಮಾಜಿ ಶಾಸಕ ‘ಪ್ರೀತಂಗೌಡ’ ಫ್ಲೆಕ್ಸ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!

ಬೆಂಗಳೂರು : ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಫ್ಲೆಕ್ಸ್ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿ ನಡೆದಿದೆ.

ಬಿಜೆಪಿ, ಜೆಡಿಎಸ್ ನಾಯಕರನ್ನ ಸ್ವಾಗತಿಸಲು ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್ಗಳಲ್ಲಿ ಪ್ರೀತಂ ಫೋಟೋ ಹಾಕಿದ್ದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ನಂತರ ಕೈಕೈ ಮಿಲಾಯಿಸುವ ಹಂತಕ್ಕೆ ಕೂಡ ಗಲಾಟೆ ಹೋಗಿತ್ತು. ಇದೀಗ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ಗಳಿಗೆ ಬೆಂಕಿ ಹಚ್ಚಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read