HomeKarnatakaBIG NEWS : ಶಾಸಕ 'ಪ್ರದೀಪ್ ಈಶ್ವರ್' ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ;...

BIG NEWS : ಶಾಸಕ ‘ಪ್ರದೀಪ್ ಈಶ್ವರ್’ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ; ನಾಲ್ವರು ಅರೆಸ್ಟ್..!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿದ್ದಾಗ ಕಲ್ಲು ತೂರಿದ್ದೇವೆ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಜೂ.4 ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಗೆಲುವಾದ ಹಿನ್ನೆಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular