HomeIndiaBIG NEWS : ದೇಶದ GDP ಬೆಳವಣಿಗೆ ದರ ಶೇ.7.8 ಕ್ಕೆ ಏರಿಕೆ ; ಪ್ರಧಾನಿ...

BIG NEWS : ದೇಶದ GDP ಬೆಳವಣಿಗೆ ದರ ಶೇ.7.8 ಕ್ಕೆ ಏರಿಕೆ ; ಪ್ರಧಾನಿ ಮೋದಿ ಸಂತಸ |WATCH VIDEO

ನವದೆಹಲಿ: 2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಭಾರತದ ಜಿಡಿಪಿ ಬೆಳವಣಿಗೆ ದರ ಶೇ.7.8ಕ್ಕೆ ಏರಿಕೆಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಾಧನೆ ದೇಶದ ಜನರ ಸಂಕಲ್ಪದಿಂದಲೇ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದ ಹಲವು ದೇಶಗಳು ಯುದ್ಧಗಳು ಹಾಗೂ ಅನಿಶ್ಚಿತ ಪರಿಸ್ಥಿತಿಗಳನ್ನು ಎದುರಿಸುತ್ತಿವೆ. ಜಾಗತಿಕ ಪೂರೈಕೆ ಸರಪಳಿಗೂ (Supply Chain) ಹೊಡೆತ ಬಿದ್ದಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಆರಂಭವಾದ ಬಳಿಕವೂ ವಿಶ್ವದ ಹಲವು ದೇಶಗಳು ಇನ್ನೂ ಸಂಪೂರ್ಣವಾಗಿ ಸ್ಥಿರಗೊಂಡಿಲ್ಲ. ಇಂತಹ ಸವಾಲಿನ ಪರಿಸ್ಥಿತಿಯ ನಡುವೆಯೂ ಭಾರತ ವೇಗವಾಗಿ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಕಂಡು ಕೆಲವರು ಸುಳ್ಳು ಮಾಹಿತಿಗಳನ್ನು ಹರಡುತ್ತಿದ್ದಾರೆ. ಆದರೆ ಇಂತಹ ಅಪಪ್ರಚಾರಗಳನ್ನು ತಳ್ಳಿಹಾಕಿ ದೇಶದ ಜನರು ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭವಿಷ್ಯದಲ್ಲಿ ದೇಶದ ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಬೇಕಾದರೆ ಆತ್ಮನಿರ್ಭರ ಭಾರತ ನಿರ್ಮಾಣ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ. ದೇಶೀಯ ಉತ್ಪನ್ನಗಳನ್ನು ಹೆಚ್ಚು ಬಳಸಬೇಕು ಹಾಗೂ ‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದಾರೆ.

ವಿದೇಶ ಪ್ರವಾಸಗಳಿಗೆ ತೆರಳುವುದನ್ನು ಕಡಿಮೆ ಮಾಡಬೇಕು. ವಿದೇಶಗಳಲ್ಲಿ ಮದುವೆಗಳನ್ನು ಆಯೋಜಿಸುವ ಬದಲು ದೇಶದಲ್ಲೇ ಮದುವೆ ಸಮಾರಂಭಗಳನ್ನು ನಡೆಸಬೇಕು ಎಂದು ಸಲಹೆ ನೀಡಿದ್ದಾರೆ. ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಅಗತ್ಯವಿಲ್ಲದಿದ್ದರೆ ಚಿನ್ನವನ್ನೂ ಖರೀದಿಸಬಾರದು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಆತ್ಮನಿರ್ಭರತೆಗೆ ಹೆಚ್ಚಿನ ಆದ್ಯತೆ ನೀಡಿದರೆ 2047ರ ವೇಳೆಗೆ ಮುಂದಿನ ಪೀಳಿಗೆಗೆ ವಿಕಸಿತ ಭಾರತವನ್ನು ನೀಡಲು ಸಾಧ್ಯವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯುವಜನರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಭಾರತವನ್ನು ಅಭಿವೃದ್ಧಿಯ ಇನ್ನಷ್ಟು ಉನ್ನತ ಶಿಖರಗಳಿಗೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular