HomeLatest NewsBIG NEWS: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 93 ಸಾವಿರಕ್ಕೂ ಅಧಿಕ ಹುದ್ದೆ ಖಾಲಿ

BIG NEWS: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 93 ಸಾವಿರಕ್ಕೂ ಅಧಿಕ ಹುದ್ದೆ ಖಾಲಿ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 93,139 ಹುದ್ದೆಗಳು ಖಾಲಿ ಇವೆ. ಮಂಜೂರಾದ ಒಟ್ಟು ಹುದ್ದೆಯ ಪೈಕಿ ಶೇಕಡ 8.5 ರಷ್ಟು ಹುದ್ದೆಗಳು ಖಾಲಿ ಇವೆ ಎಂದು ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಸಂಸದ ಅಶೋಕ್ ಮಿತ್ತಲ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ವ್ಯವಹಾರಗಳ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್, ಕೇಂದ್ರ ಸಶಸತ್ರ ಪಡೆಗಳಲ್ಲಿ 2026ರ ಜನವರಿ 1ರ ವರೆಗೆ ಖಾಲಿ ಇರುವ ಹುದ್ದೆಗಳನ್ನು ವರದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ(CISF) 28,342 ಹುದ್ದೆಗಳು ಖಾಲಿ. ITBP ಯಲ್ಲಿ 12,333, ಗಡಿಭದ್ರತಾ ಪಡೆಯಲ್ಲಿ(BSF) 14,531, ಸಶಸ್ತ್ರ ಸೀಮಾ ಬಲದಲ್ಲಿ 6784, ಅಸ್ಸಾಂ ರೈಫಲ್ಸ್ 3749 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular