HomeLatest NewsBIG NEWS: ಅಂತರ್ಜಲ ಹೆಚ್ಚಳ, ಮಳೆ ನೀರು ಸಂಗ್ರಹ ಸೇರಿ ಜಲ ಸಂರಕ್ಷಣೆ ಮಾಡಿದ 7...

BIG NEWS: ಅಂತರ್ಜಲ ಹೆಚ್ಚಳ, ಮಳೆ ನೀರು ಸಂಗ್ರಹ ಸೇರಿ ಜಲ ಸಂರಕ್ಷಣೆ ಮಾಡಿದ 7 ಜಿಲ್ಲೆಗಳ ಗ್ರಾಪಂಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನರೇಗಾ ಯೋಜನೆಯಡಿ ಜಲ ಸಂಚಯ ಜನ ಭಾಗೀದಾರಿ ಅಭಿಯಾನದಡಿ ಜಲ ಸಂರಕ್ಷಣೆಯಲ್ಲಿ ತೊಡಗಿರುವ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡ ರಾಜ್ಯದ 7 ಜಿಲ್ಲೆಗಳಿಗೆ “ಜಲ ಸಂಚಯ ಜನ ಭಾಗಿದಾರಿ” ಅಭಿಯಾನದಡಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಗೆ ಆಯ್ಕೆಯಾದ ಎಲ್ಲ ಜಿಲ್ಲಾ ಪಂಚಾಯತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಅಭಿಯಾನದ ಮುಖ್ಯ ಉದ್ದೇಶ ಅಂತರ್ಜಲವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂರಕ್ಷಿಸುವುದು, ಜಲಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ಕೊಳವೆಬಾವಿ, ಸಮಗ್ರ ಕೆರೆ-ಕಟ್ಟೆ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಚೆಕ್ ಡ್ಯಾಮ್ ನಿರ್ಮಾಣ ಸೇರಿದಂತೆ ಜಲಸಂರಕ್ಷಣೆಯ ಎಲ್ಲ ಮಾರ್ಗಗಳನ್ನು ಅಭಿವೃದ್ಧಿಪಡಿಸುವುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರೇಗಾ ಯೋಜನೆಯ ಸಹಾಯದಿಂದ  ಜಲಸಂರಕ್ಷಣೆಗಾಗಿ, ಗದಗ ಜಿಲ್ಲೆಯಲ್ಲಿ – 11,971 ವಿಜಯಪುರ – 11,453 , ಬೀದರ್ -10,297,  ಕೋಲಾರ – 8,470  ತುಮಕೂರು – 9,885, ಮಂಡ್ಯ – 7,192,  ಚಿತ್ರದುರ್ಗ – 7,815  ಕಾಮಗಾರಿಗಳನ್ನು ನಡೆಸಲಾಗಿದೆ. ಇದು ಇತರೆ ಜಿಲ್ಲೆಗಳಿಗೂ ಪ್ರೇರಣೆಯಾಗಲಿ ಎಂದು ಆಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular