ನವದೆಹಲಿ: ಅಭಯಾರಣ್ಯ, ರಾಷ್ಟ್ರೀಯ ಉದ್ಯಾನ, ಸಂರಕ್ಷಿತ ಅರಣ್ಯ ಪ್ರದೇಶಗಳ ಒಂದು ಕಿಲೋಮೀಟರ್ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ.
ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಸುವ ಗಣಿಗಾರಿಕೆ ವನ್ಯಜೀವಿಗಳಿಗೆ ಅಪಾಯಕಾರಿಯಾಗಿದೆ ಎನ್ನುವ ಸಂಗತಿಯನ್ನು ಗಮನಿಸಿದ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
ಈ ಹಿಂದೆ ಜಾರ್ಖಂಡ್ ನ ಸರಂಡಾ ವನ್ಯಜೀವಿ ಅಭಯಾರಣ್ಯ ಮತ್ತು ಸಸಂಗದಾಬುರು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ನೀಡಿದ ಆದೇಶವನ್ನು ದೇಶ ವ್ಯಾಪಿ ಅನ್ವಯಗೊಳಿಸುವಂತೆ ಆದೇಶ ನೀಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಪ್ರಶ್ನಿಸಿ ಸಲ್ಲಿಸಲಾದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.
