ನವದೆಹಲಿ: ಮೇ 1ರಿಂದ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ದೇಶವ್ಯಾಪಿ ಜಾರಿಗೆ ತರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸ್ಪಷ್ಟಪಡಿಸಿದೆ.
ಟೋಲ್ ಪ್ಲಾಜಾಗಳ ಮೂಲಕ ವಾಹನಗಳ ತಡೆರಹಿತ ಚಲನೆ ಸಕ್ರಿಯಗೊಳಿಸಲು, ಪ್ರಯಾಣದ ಸಮಯ ಕಡಿಮೆ ಮಾಡಲು ಆಯ್ದ ಟೋಲ್ ಪ್ಲಾಜಾಗಳಲ್ಲಿ ಮಾತ್ರ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ(ANPR)-ಫಾಸ್ಟ್ ಟ್ಯಾಗ್ ಆಧಾರಿತ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.