HomeKarnatakaBIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆ ಇಲ್ಲ : DCM ಡಿಕೆ ಶಿವಕುಮಾರ್...

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆ ಇಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ.!

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ , ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಮಾಧ್ಯಮದ ಮೂಲಕ ರಾಜಕೀಯ ನಡೆಯಲ್ಲ ಎಂದರು.

ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲು ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಸಂಪುಟ ಪುನಾರಚನೆಗೆ ಹೈಕಮಾಂಡ್ ನಾಯಕರು ಒಪ್ಪಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ. ಆದರೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular