BIG NEWS : ‘ಪದವಿ’ ಕೋರ್ಸ್ ಬಳಿಕ ವಿದ್ಯಾರ್ಥಿಗಳಿಗೆ ಒಂದು ವರ್ಷ ರಾಜಕೀಯ ತರಬೇತಿ ನೀಡಲು ಚಿಂತನೆ : ಸ್ಪೀಕರ್ ಯು.ಟಿ ಖಾದರ್

ಬೆಂಗಳೂರು : ‘ಪದವಿ’ ಕೋರ್ಸ್ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಒಂದು ವರ್ಷ ರಾಜಕೀಯ ತರಬೇತಿ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.

ನೂತನ ಶಾಸಕರಿಗೆ ಹಮ್ಮಿಕೊಂಡಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಯುಟಿ ಖಾದರ್ ‘ರಾಜಕೀಯ ಸೇರಲು ವಿದ್ಯಾರ್ಥಿಗಳಿಗೆ ಯಾವುದೇ ಅವಕಾಶ ಇಲ್ಲ, ಈ ನಿಟ್ಟಿನಲ್ಲಿ ಪದವಿ’ ಕೋರ್ಸ್ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಒಂದು ವರ್ಷ ರಾಜಕೀಯ ತರಬೇತಿ ನೀಡಲು ಚಿಂತನೆ ನಡೆಸಲಾಗುತ್ತಿದೆ . ಈ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆ ಚರ್ಚಿಸಿದ್ದೇನೆ’ ಎಂದು ಹೇಳಿದರು.

ನನಗೂ ಮೊದಲು ಸದನದ ಬಗ್ಗೆ ಅಷ್ಟೊಂದು ಗೊತ್ತಿರಲಿಲ್ಲ, ನಂತರ ಕೇಳಿ ತಿಳಿದುಕೊಂಡೆ. ಶಾಸಕರಿಗೆ ತಾಳ್ಮೆ ಬಹಳ ಅಗತ್ಯವಾಗಿದೆ. ಸಿಕ್ಕಿರುವ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳಬೇಕು, ಶಾಸಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆಜೆ ಜಾರ್ಜ್ ನನಗೆ ಗೊತ್ತಿರುವ ಹಾಗೆ ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ, ಪರೀಕ್ಷೆ ಹಾಗೂ ಚುನಾವಣೆ ವೇಳೆ ಲೋಡ್ ಶೆಡ್ಡಿಂಗ್ ಮಾಡಿಲ್ಲ ಎಂದರು.

ವಿದ್ಯುತ್ ಕೊರತೆಯಿಂದ ಲೋಡ್ ಶೆಡ್ಡಿಂಗ್ ಮಾಡಿಲ್ಲ, ಮೈಂಟೇನೆನ್ಸ್ಗಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ನಾನೇನು ಹೊಸದಾಗಿ ಮಂತ್ರಿಯಾಗಿಲ್ಲ ಎಂದರು. ನಿಮ್ಮ ಕೈಯಲ್ಲಿ ಆಗದೇ ಇದ್ದರೆ ಹೆಡ್ ಆಫೀಸ್ ಗೆ ಹೇಳಿ ಎಂದು ಅಧಿಕಾರಿಗಳ ಬಳಿ ಕೆಜೆ ಜಾರ್ಜ್ ಗರಂ ಆಗಿದ್ದಾರೆ. 4 ವರ್ಷ ಸರ್ಕಾರ ನಡೆಸಿದ್ದು ಯಾರು, ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ. 200 ಯೂನಿಟ್ ಒಳಗೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಎಂದು ಸಚಿವ ಕೆ ಜೆ ಜಾರ್ಜ್ ಹೇಳಿದರು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read