HomeInternationalBIG NEWS : ಕೇಂದ್ರದ ಅನುದಾನ ತಾರತಮ್ಯಕ್ಕೆ ಆಕ್ರೋಶ : ಫೆ. 7 ರಂದು ದೆಹಲಿಯಲ್ಲಿ...

BIG NEWS : ಕೇಂದ್ರದ ಅನುದಾನ ತಾರತಮ್ಯಕ್ಕೆ ಆಕ್ರೋಶ : ಫೆ. 7 ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರದಿಂದ ಪ್ರತಿಭಟನೆ

ಹೊಸಪೇಟೆ : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ. ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್‌ಡಿಆರ್‌ಎಫ್ ನಿಂದ 4,663 ಕೋಟಿ ರೂ. ಮೊತ್ತವನ್ನು ನೀಡಲು ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಾನೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದರು.

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5,495 ಕೋಟಿ  ರೂ. ವಿಶೇಷ ಅನುದಾನ ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6,000 ಕೋಟಿ ರೂ. ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಈ ಅನ್ಯಾಯವನ್ನು ವಿರೋಧಿಸಿ ಫೆ.7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳಲು ನಡೆಸುತ್ತಿರುವ ಪ್ರತಿಭಟನೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular