HomeLatest NewsBIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

BIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

ದುಬೈ: ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಫೈನಲ್ ಪ್ರವೇಶಿಸಿದೆ.

ಸೆಪ್ಟೆಂಬರ್ 28ರಂದು ಫೈನಲ್ ನಲ್ಲಿ ಭಾರತ -ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಲಿದೆ. ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ 11 ಗಳಿಂದ ಜಯಗಳಿಸಿ ಫೈನಲ್ ಪ್ರವೇಶಿಸಿದೆ.

ಪಾಕಿಸ್ತಾನ ತಂಡ 135/8(20), ಬಾಂಗ್ಲಾ ತಂಡ 124/9(20) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಜಯಗಳಿಸಿದೆ. ಏಷ್ಯಾ ಕಪ್ ನಲ್ಲಿ ಮೊದಲ ಬಾರಿಗೆ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈಗಾಗಲೇ ಟೂರ್ನಿಯಲ್ಲಿ ಎರಡು ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಜಯಗಳಿಸಿದೆ. ಸೆ. 28ರಂದು ನಡೆಯಲಿರುವ ಫೈನಲ್ ನಲ್ಲೂ ಪಾಕಿಸ್ತಾನವನ್ನು ಬಗ್ಗು ಬಡಿಯುವ ವಿಶ್ವಾಸದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular