HomeLatest NewsBIG NEWS: ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ‘ಗೋಡೆಬರಹ’...

BIG NEWS: ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ‘ಗೋಡೆಬರಹ’ ಕಡ್ಡಾಯ

ಕೊಪ್ಪಳ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್‌ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು.

ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ.

ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದ್ದು, ಕಾಯ್ದೆಯ ಕುರಿತು ಸಮುದಾಯಗಳಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ವಿವಾಹ ಆಯೋಜಕರು, ದೇವಸ್ಥಾನ, ಶಾದಿ ಮಹಲ್‌ಗಳ, ಉಸ್ತುವಾರಿ ಸದಸ್ಯರು, ಕಲ್ಯಾಣ ಮಂಟಪ ಮತ್ತು ಫಂಕ್ಷನ್ ಹಾಲ್‌ಗಳ ವ್ಯವಸ್ಥಾಪಕರುಗಳಿಗೆ ಅವರುಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳಲ್ಲಿ ಅಥವಾ ಅಧೀನದಲ್ಲಿರುವ ಸ್ಥಳದಲ್ಲಿ ಬಾಲ್ಯವಿವಾಹ ಜರುಗದಂತೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ, ಅಂತವರನ್ನು ಹಾಗೂ ಸರಕು ಮತ್ತು ಸೇವೆಗಳನ್ನು ಒದಗಿಸಿದವರನ್ನೂ ಸಹ ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಲಾಗುವುದಾಗಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular