HomeLatest NewsBIG NEWS: 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಅನುಮತಿ

BIG NEWS: 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಅನುಮತಿ

ಬೆಂಗಳೂರು: 2025-26ನೇ ಸಾಲಿನಲ್ಲಿ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ರಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018, ದಿನಾಂಕ:18.05.2019ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ/ಇತರ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ) (Bilingual) ಬಳಸಿಕೊಂಡು ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018, ದಿನಾಂಕ:18.05.2019ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಕ್ರಮಾಂಕ (4)ರ ಸರ್ಕಾರದ ಆದೇಶದಲ್ಲಿ ರಾಜ್ಯದ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ(ದ್ವಿಭಾಷಾ ಮಾಧ್ಯಮ)(Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018, ದಿನಾಂಕ:18.05.2019ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಕ್ರಮಾಂಕ (5)ರ ಸರ್ಕಾರದ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರುರವರು ‘ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಆಂಗ್ಲ (ದ್ವಿಭಾಷಾ)(Bilingual) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸಚಿವರುಗಳಿಂದ, ಜನಪ್ರತಿನಿಧಿಗಳಿಂದ ಇಲಾಖಾಧಿಕಾರಿಗಳಿಂದ ಶಿಫಾರಸ್ಸು ಪತ್ರಗಳು ಮತ್ತು ಮನವಿಗಳು ಸೇರಿದಂತೆ ಒಟ್ಟು 984 ಪ್ರಾಥಮಿಕ ಶಾಲೆಗಳಲ್ಲಿ ದ್ವಿ-ಭಾಷ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮೋದನೆಯನ್ನು ಕೋರಿರುತ್ತಾರೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ. ಬೆಂಗಳೂರುರವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿ ಲಗತ್ತಿಸಿದ ರಾಜ್ಯದ ಒಟ್ಟು 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯು ಹಿಂಬರಹ ಸಂಖ್ಯೆ:ಆಇ 507 ವೆಚ್ಚ-8/2025, 2:25.08.20250), :: 2.2. 02 & 2025. ದಿನಾಂಕ:30.06.2025ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular