HomeLatest NewsBIG NEWS: ಅನುಮತಿ ಇಲ್ಲದೆ ಫೋನ್ ಕರೆ ವಿವರ ದಾಖಲೆ ಪಡೆಯುವಂತಿಲ್ಲ: ಹೈಕೋರ್ಟ್ ಆದೇಶ

BIG NEWS: ಅನುಮತಿ ಇಲ್ಲದೆ ಫೋನ್ ಕರೆ ವಿವರ ದಾಖಲೆ ಪಡೆಯುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಧಿಕಾರಿಯಾಗಿದ್ದೇನೆ ಎನ್ನುವ ದರ್ಪದಲ್ಲಿ ಪೊಲೀಸರು ಕಾನೂನುಬದ್ಧ ತನಿಖೆಗೆ ಅನುಮತಿ ಪಡೆದುಕೊಳ್ಳದೆ ಯಾವುದೇ ವ್ಯಕ್ತಿಯ ಮೊಬೈಲ್ ಫೋನ್ ನ ಸಿಡಿಆರ್(ಕರೆ ವಿವರ ದಾಖಲೆ) ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪೊಲೀಸರು ತಮ್ಮ ಇಚ್ಛೆಗೆ ಅನುಗುಣವಾಗಿ ಸಿಡಿಆರ್ ಪಡೆಯುವ ಅಧಿಕಾರ ಚಲಾಯಿಸಿದರೆ ಅದು ಪೊಲೀಸ್ ರಾಜ್ಯವಾಗುತ್ತದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಮಹಿಳೆಯೊಬ್ಬರ ಸಿಡಿಆರ್ ಅನ್ನು ಅಕ್ರಮವಾಗಿ ಪಡೆದ ಆರೋಪ ಎದುರಿಸುತ್ತಿರುವ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂ.ವಿ. ವಿದ್ಯಾ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ರಜಾ ಕಾಲದ ನ್ಯಾಯಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾ ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಅಪರಾಧ ದಂಡ ಪ್ರಕ್ರಿತಾ ಸಂಹಿತೆ ಅಡಿಯಲ್ಲಿ ಅನುಮತಿಯ ಆದೇಶವಿಲ್ಲದೆ ಸಿಡಿಆರ್ ಕೋರಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಆದರೆ, ಇದನ್ನು ಒಪ್ಪದ ನ್ಯಾಯ ಪೀಠ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿದ್ದ ಕನ್ನಡಿಗ ಪುಟ್ಟಸ್ವಾಮಿ ಪ್ರಕರಣದಲ್ಲಿ ಸ್ಪಷ್ಟಪಡಿಸಿರುವಂತೆ ಯಾವುದೇ ವ್ಯಕ್ತಿಯ ಸಿಡಿಆರ್ ದಾಖಲೆಗಳು ಗೌಪ್ಯತೆಯ ಹಕ್ಕಿನಿಂದ ನಿಯಂತ್ರಿಸಲಾಗುವ ವೈಯಕ್ತಿಕ ಮತ್ತು ಖಾಸಗಿ ವಿವರಗಳಾಗಿವೆ. ಹೀಗಾಗಿ ನಿರ್ದಿಷ್ಟ ವ್ಯಕ್ತಿಯ ಸಿಡಿಆರ್ ಪಡೆಯುವ ಅಧಿಕಾರವನ್ನು ತನಿಖಾಧಿಕಾರಿ ಮಾತ್ರ ಚಲಾಯಿಸಬೇಕಾಗುತ್ತದೆ ಎಂದು ಹೇಳಿದ್ದು, ಅನುಮತಿ ಇಲ್ಲದೆ ಸಿಡಿಆರ್ ಪಡೆಯುವಂತಿಲ್ಲ ಎಂದು ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular