HomeKarnatakaBIG NEWS : ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ-ಸಿಎಂ ಸಿದ್ದರಾಮಯ್ಯ ಭೇಟಿ

BIG NEWS : ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ-ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ರಾಜ್ಯದ ಅಭಿವೃದ್ದಿ ಯೋಜನೆಗಳಿಗೆ ಅನುದಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಮೇಕೆದಾಟು , ಮಹದಾಯಿ ಅನುಮತಿಗೆ ಸಿದ್ದರಾಮಯ್ಯ ಮೋದಿಗೆ ಮನವಿ ಸಲ್ಲಿಸಲಿದ್ದಾರೆ . ಹಾಗೂ ರಾಜ್ಯದ ವಿವಿಧ ಅಭಿವೃದ್ದಿ ವಿಚಾರಗಳ ಬಗ್ಗೆ ಕೂಡ ಮಾತುಕತೆ ನಡೆಸಲಿದ್ದಾರೆ.

ನವದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಚರ್ಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular