BIG NEWS: ಪ್ರಧಾನಿ ಮೋದಿ ‘ಮನ್ ಕಿ ಬಾತ್’ನಿಂದ ಆಕಾಶವಾಣಿಗೆ 34.13 ಕೋಟಿ ರೂ. ಆದಾಯ…!

ನವದೆಹಲಿ: ಪ್ರಧಾನಿ ಮೋದಿ ಅವರು ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಿಂದ ಆಕಾಶವಾಣಿಗೆ 34.13 ಕೋಟಿ ಆದಾಯ ಬಂದಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ತಿಳಿಸಿದ್ದಾರೆ.

ರಾಜ್ಯಸಭೆಗೆ ಈ ಕುರಿತಾಗಿ ಮಾಹಿತಿ ನೀಡಿದ ಸಚಿವರು, ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಆಕಾಶವಾಣಿಯು ಯೂಟ್ಯೂಬ್ ಸೇರಿ ವಿವಿಧ ಡಿಜಿಟಲ್ ರೂಪದ ವೇದಿಕೆಗಳಲ್ಲಿ ಪ್ರಸಾರ ಮಾಡುತ್ತಿದೆ. 2014ರ ಅಕ್ಟೋಬರ್ ನಿಂದ ಆರಂಭವಾದ ‘ಮನ್ ಕಿ ಬಾತ್’ ಬಾನುಲಿ ಕಾರ್ಯಕ್ರಮ ಇದುವರೆಗೆ 126 ಆವೃತ್ತಿ ಕಂಡಿದೆ. ‘ಮನ್ ಕಿ ಬಾತ್’ನಿಂದ 34.13 ಕೋಟಿ ಆದಾಯವನ್ನು ಆಕಾಶವಾಣಿ ಗಳಿಸಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read