HomeLatest NewsBIG NEWS: ಶಾಲಾ, ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ

BIG NEWS: ಶಾಲಾ, ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಹೌದು, ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಸಂಚಾರ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಸಂಬಂಧ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಶಿಕ್ಷಣ ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಂಚಾರ ಹಾಗೂ ಸುರಕ್ಷತೆ ಎಡಿಜಿಪಿ ಆರ್. ಹಿತೇಂದ್ರ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಗಳ ಸ್ಥಿತಿಗತಿ ಬಗ್ಗೆ ಸಾರಿಗೆ ಇಲಾಖೆಯಿಂದ ಮಾಹಿತಿ ಪಡೆಯಬೇಕು. ಚಾಲಕ ಮಧ್ಯಪಾನಿ ಅಥವಾ ಮಾದಕ ವ್ಯಸನಿಯಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರವಾಸದ ವೇಳೆ ಒಬ್ಬ ಶಿಕ್ಷಕರು, ಒಬ್ಬ ಗಾರ್ಡ್ ಇರಬೇಕು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇರಬೇಕು. ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular