HomeKarnatakaBIG NEWS : ರಾಮನಗರದಲ್ಲಿ ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು..!

BIG NEWS : ರಾಮನಗರದಲ್ಲಿ ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು..!

ರಾಮನಗರ : ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಘಟನೆ ಇಂದು ನಡೆದಿದ್ದು, ನಿಖಿಲ್ ಕುಮಾರಸ್ವಾಮಿ ಪೊಲೀಸರ ವಿರುದ್ಧ ಗರಂ ಆಗಿದ್ದಾರೆ.

ರಾಮನಗರ ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವಣೆ ಮುಂದೂಡಿಕೆ ಸಂಬಂಧ ಇಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 2 ಬಾರಿ ಚುನಾವಣೆ ನಿಗದಿಯಾಗಿದ್ರೂ ಎಲೆಕ್ಷನ್ ನಡೆಸಿಲ್ಲ ಎಂದು ಕಂದಾಯ ಇಲಾಖೆ ಬಳಿ ಪ್ರತಿಭಟನೆ ನಡೆಸಲಾಗಿದೆ.

ಕಂದಾಯ ಭವನಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಕೂಡ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular