ಮುಂಬೈ: ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಶುಕ್ರವಾರ ಹೃದಯಾಘಾತದಿಂದ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು.
ಜೋಶಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಶಾಸಕರಾಗಿ ಅವರ ಶ್ರದ್ಧೆಯಿಟ್ಟ ಮಾಡಿದ ಕೆಲಸಕ್ಕೆ ಅವರನ್ನು ನೆನಪಿಸಿಕೊಳ್ಳಲಾಗುವುದು ಎಂದು ಹೇಳಿದ ಮೋದಿ, ಮಾಜಿ ಮುಖ್ಯಮಂತ್ರಿ ರಾಜ್ಯದ ಪ್ರಗತಿಗಾಗಿ ದಣಿವರಿಯದೆ ಕೆಲಸ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಮನೋಹರ್ ಜೋಶಿ ಜಿ ಅವರ ನಿಧನದಿಂದ ನೋವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಪ್ರಗತಿಗಾಗಿ ದಣಿವರಿಯದೆ ಕೆಲಸ ಮಾಡಿದರು. ಅವರು ಕೇಂದ್ರ ಸಚಿವರಾಗಿಯೂ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಮನೋಹರ್ ಜೋಶಿ ಅವರು ಶಾಸಕರಾಗಿ ಅವರ ಶ್ರದ್ಧೆಗಾಗಿ, ಎಲ್ಲಾ ನಾಲ್ಕು ಶಾಸಕಾಂಗಗಳಲ್ಲಿ ಸೇವೆ ಸಲ್ಲಿಸಿದ ಗೌರವವನ್ನು ಹೊಂದಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.
Pained by the passing away of @BJP4India MLA in the Maharashtra Assembly, Shri Rajendra Patni Ji. He was at the forefront of several community service initiatives and was an effective voice for the people. He played a commendable role in strengthening the Party as well.…
— Narendra Modi (@narendramodi) February 23, 2024

