HomeLatest NewsBIG NEWS: ಪ್ರಧಾನಿ ಮೋದಿ ಪದವಿ ವಿವರ ಬಹಿರಂಗ ಆದೇಶ ರದ್ದು: ಹೈಕೋರ್ಟ್ ತೀರ್ಪು ಪ್ರಕಟ

BIG NEWS: ಪ್ರಧಾನಿ ಮೋದಿ ಪದವಿ ವಿವರ ಬಹಿರಂಗ ಆದೇಶ ರದ್ದು: ಹೈಕೋರ್ಟ್ ತೀರ್ಪು ಪ್ರಕಟ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿ ಕುರಿತ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯುಕ್ತರು ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿದೆ.

ಕೇಂದ್ರ ಮಾಹಿತಿ ಆಯುಕ್ತರ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಫೆಬ್ರವರಿ 27ರಂದು ಕಾಯ್ದಿರಿಸಿದ್ಧ ತೀರ್ಪನ್ನು ಆಗಸ್ಟ್ 25ರಂದು ಪ್ರಕಟಿಸಿದ್ದಾರೆ.

ಪ್ರಧಾನಿ ಮೋದಿ ಅವರ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಕೋರಿ ನೀರಜ್ ಎಂಬುವರು ಮೂಲಕ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಮಾಹಿತಿ ಆಯುಕ್ತರು ನೀಡಿದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿ ಸೋಮವಾರ ತೀರ್ಪು ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular