HomeLatest NewsBIG NEWS: ನಾಯಕತ್ವ ಗೊಂದಲ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ...

BIG NEWS: ನಾಯಕತ್ವ ಗೊಂದಲ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಮುಖಾಮುಖಿ: ಇಂದೇ ಪರಿಹಾರ ಸಾಧ್ಯತೆ

ಬೆಂಗಳೂರು: ನಾಯಕತ್ವ ಗೊಂದಲದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಶಿವಕುಮಾರ್ ಇಬ್ಬರೂ ಒಟ್ಟಿಗೆ ಮೈಸೂರಿನಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿಗೆ ಈ ಭೇಟಿ ಪರಿಹಾರ ನೀಡಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ. ಊಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ತೆರಳುತ್ತಿದ್ದು, ಮಾರ್ಗ ಮಧ್ಯೆ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಟ್ಟಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ಸಂದರ್ಭದಲ್ಲಿ ಹಲವು ತಿಂಗಳಿನಿಂದ ಪಕ್ಷ ಮತ್ತು ಸರ್ಕಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ನಾಯಕರ ನಡುವೆ ಚರ್ಚೆ ನಡೆಯಲಿದೆ. ನಾಯಕತ್ವ ಮತ್ತು ಅಧಿಕಾರ ಹಸ್ತಾಂತರ ವಿಚಾರ ಭೇಟಿಯ ವೇಳೆ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಪ್ರಸ್ತಾಪಿಸುವ ಸಾಧ್ಯತೆ ಇದೆ. ತಮಗೆ ಅವಕಾಶ ನೀಡುವಂತೆ ಬೇಡಿಕೆ ಇಡಲು ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯವರನ್ನು ಭೇಟಿಯಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಊಬಯ ನಾಯಕರಿಗೆ ರಾಹುಲ್ ಗಾಂಧಿ, ಹೊಂದಿಕೊಂಡು ಹೋಗಲು ಪರಿಹಾರ ಸೂತ್ರವನ್ನು ಹೇಳುತ್ತಾರೆಯೇ ಅಥವಾ ದೆಹಲಿಗೆ ಬರುವಂತೆ ಸೂಚನೆ ನೀಡುತ್ತಾರೆಯೇ, ಇಲ್ಲವೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜೊತೆಗೆ ಚರ್ಚೆಗೆ ಸಲಹೆ ನೀಡುತ್ತಾರೆಯೇ ಎನ್ನುವುದು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular