BIG NEWS: ಭಾರೀ ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ: ಇಂದು ಮತಗಳವು ಬಗ್ಗೆ ಹೈಡ್ರೋಜನ್ ಬಾಂಬ್ ಸಿಡಿಸುವ ಸಾಧ್ಯತೆ

ನವದೆಹಲಿ: ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿ ಭಾರಿ ಸಂಚಲನ ಸೃಷ್ಟಿಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಅವರು ಪತ್ರಿಕಾಗೋಷ್ಠಿಯಲ್ಲಿ ಮತಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಡ್ರೋಜನ್ ಬಾಂಬ್ ಸಿಡಿಸುವ ಸಾಧ್ಯತೆ ಇದೆ.

ಸೆಪ್ಟೆಂಬರ್ 17ರಂದು ಇಂದಿರಾ ಭವನ ಸಭಾಂಗಣದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಶೇಷ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮಾಹಿತಿ ನೀಡಿದ್ದಾರೆ. ಯಾವ ವಿಷಯದ ಕುರಿತಾಗಿ ರಾಹುಲ್ ಗಾಂಧಿ ಮಾತನಾಡಿದ್ದಾರೆ ಎನ್ನುವುದನ್ನು ಹೇಳಿಲ್ಲವಾದರೂ ಮತಗಳವು ಬಗ್ಗೆ ರಾಹುಲ್ ಗಾಂಧಿ ಬಾಂಬ್ ಸಿಡಿಸುವ ಸಾಧ್ಯತೆ ಇದೆ.

ವೋಟ್ ಅಧಿಕಾರ ಯಾತ್ರೆಯ ಕೊನೆಯ ದಿನ ರಾಹುಲ್ ಗಾಂಧಿ, ಕಾಂಗ್ರೆಸ್ ದೊಡ್ಡ ಹೈಡ್ರೋಜನ್ ಬಾಂಬ್ ಸಿಡಿಸಲಿದೆ. ನಂತರ ಪ್ರಧಾನಿ ಮೋದಿ ಅವರು ದೇಶಕ್ಕೆ ಮುಖ ತೋರಿಸಲು ಯೋಗ್ಯರಿರುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ರಾಹುಲ್ ಗಾಂಧಿ ಇಂದು ನಡೆಸಲಿರುವ ಸುದ್ದಿಗೋಷ್ಠಿಯ ಕುರಿತಾಗಿ ಭಾರಿ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read