BIG NEWS:‌ ಚುನಾವಣೆಗೂ ಮೊದಲೇ ಜನಸಾಮಾನ್ಯರಿಗೆ ರಿಲೀಫ್‌, ಪೆಟ್ರೋಲ್ – ಡೀಸೆಲ್‌ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ

2022ರ ಮೇ ತಿಂಗಳಿನಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಶತಮಾನದಲ್ಲೇ ಅತ್ಯಂತ ದುಬಾರಿಯಾಗಿದೆ ತೈಲ ಬೆಲೆ. ಈ ಬೆಲೆ ಏರಿಕೆ ಜನಸಾಮಾನ್ಯರ ಜೇಬು ಸುಡುತ್ತಿದೆ. ಶೀಘ್ರದಲ್ಲೇ ಈ ಹೊರೆಯನ್ನು ಇಳಿಸಲು ಕೇಂದ್ರ ಸರ್ಕಾರ ಮುಂದಾಗುವ ಸಾಧ್ಯತೆಗಳಿವೆ.

ಚುನಾವಣೆಗೂ ಮುನ್ನ ಹಣದುಬ್ಬರದಿಂದ ಮುಕ್ತಿ ಸಿಗುವ ನಿರೀಕ್ಷೆಯಲ್ಲಿದ್ದಾರೆ ಜನಸಾಮಾನ್ಯರು. ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡ ಈ ನಿರ್ಧಾರಕ್ಕೆ ಬರಬಹುದು.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಕಡಿಮೆ ಇದೆ. ಹಾಗಾಗಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಕುಸಿತದಿಂದಾಗಿ ತೈಲ ಕಂಪನಿಗಳ ಲಾಭ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆ ಇಳಿಕೆ ಮಾಡಬಹುದು.

ವರದಿಗಳ ಪ್ರಕಾರ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿ, ಎಚ್‌ಪಿಸಿಎಲ್, ಬಿಪಿಸಿಎಲ್ ಪ್ರತಿ ಲೀಟರ್ ಪೆಟ್ರೋಲ್‌ನಲ್ಲಿ 11 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್‌ನಲ್ಲಿ 6 ರೂಪಾಯಿ ಲಾಭ ಗಳಿಸುತ್ತಿವೆ. ಡಿಸೆಂಬರ್ ತ್ರೈಮಾಸಿಕದಲ್ಲಿ ತೈಲ ಕಂಪನಿಗಳ ಲಾಭ 75 ಸಾವಿರ ಕೋಟಿ ಆಗಬಹುದು. ಕಂಪನಿಗಳ ಮಾರ್ಜಿನ್‌ ಹೆಚ್ಚಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಯಲ್ಲಿ ಇಳಿಕೆಯಾಗಬಹುದು. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದ್ದರೆ ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 5 ರಿಂದ 10 ರೂಪಾಯಿಗಳಷ್ಟು ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಿಂದ ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಆದರೂ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಿಲ್ಲ. ಹೀಗಿರುವಾಗ ಲೋಕಸಭೆ ಚುನಾವಣೆಗೂ ಮುನ್ನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಣನೀಯವಾಗಿ ಇಳಿಸುವ ಮೂಲಕ ಜನಸಾಮಾನ್ಯರಿಗೆ ನೆಮ್ಮದಿ ನೀಡಬಹುದೆಂಬ ನಿರೀಕ್ಷೆಯಿದೆ. ಚುನಾವಣೆ ದೃಷ್ಟಿಯಿಂದಲೂ ಬೆಲೆ ಇಳಿಕೆ ನಿರ್ಧಾರ ಸರ್ಕಾರಕ್ಕೆ ವರವಾಗಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read