BIG NEWS : ರಾಜ್ಯ ಸರ್ಕಾರಿ ನೌಕರರ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಅವಧಿ ವಿಸ್ತರಿಸುವಂತೆ ಮನವಿ |CLT Karnataka

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ 31:12:2025 ರವರೆಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಇ ಆಡಳಿತ ಕೇಂದ್ರ ಮನವಿ ಮಾಡಿದೆ.

ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ. ಉಲ್ಲೇಖ (2)ರ ಅನ್ವಯ, ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.

ಆದರೆ, 2024ರ ಜನವರಿಯಿಂದ ಈವರೆಗೆ ಕಿಯೋನಿಕ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದೇ ಇದ್ದ ಕಾರಣ, ಇನ್ನೂ ಸುಮಾರು 1.40 ಲಕ್ಷಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುತ್ತದೆ.ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲು ಇ ಆಡಳಿತ ಕೇಂದ್ರ ಮನವಿ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read