BIG NEWS : `ಹೊರಗುತ್ತಿಗೆ’ ಆಧಾರಿತ ಹುದ್ದೆಗಳ ನೇಮಕಾತಿಯಲ್ಲೂ ಮೀಸಲಾತಿ : ಸಿಎಂ ಸಿದ್ದರಾಮಯ್ಯ

 

ಬೆಂಗಳೂರು : ರಾಜ್ಯದಲ್ಲಿ ಹೊರಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಯಲ್ಲೂ ಮೀಸಲಾತಿ ತರುವ ಚಿಂತನೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಸಂತನಗರದಲ್ಲಿ ನಡೆದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಸರ್ಕಾರದ ಶೇ. 33 ರಷ್ಟು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗಿದ್ದು, ನಮ್ಮ ಅವಧಿಯಲ್ಲಿ ಇದಕ್ಕೆ ಕಡಿವಾಣ ಬೀಳಲಿದೆ ಎಂದರು.

ಹೊರಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಮೀಸಲಾತಿ ಇಲ್ಲ. ಇದರಿಂದ ನಾವು ಸಾಮಾಜಿಕ ನ್ಯಾಯವನ್ನು ಕಾಣಲು ಸಾಧ್ಯವಿಲ್ಲ. ಹೀಗಾಗಿ ನಾವು ಹೊರಗುತ್ತಿಗೆ ನೇಮಕಾತಿಗೂ ಮೀಸಲಾತಿಯನ್ನು ತರುವ ಚಿಂತನೆ ಮಾಡಿದ್ದೇವೆ ಎಂದರು.

ಪ್ರಣಾಳಿಕೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದೇವೆ. ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆಯಲ್ಲಿ ಹೆಚ್ಚಿನ ಹುದ್ದೆಗಳಿದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿ ನಡೆಯುವವರೆಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ತರುವ ಚಿಂತನೆ ಇದೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read