HomeLatest NewsBIG NEWS: ರಾಜ್ಯದಲ್ಲೂ ಮಕ್ಕಳಿಗೆ ಜಾಲತಾಣ ಬಳಕೆಗೆ ಕಡಿವಾಣ

BIG NEWS: ರಾಜ್ಯದಲ್ಲೂ ಮಕ್ಕಳಿಗೆ ಜಾಲತಾಣ ಬಳಕೆಗೆ ಕಡಿವಾಣ

ಬೆಂಗಳೂರು(ವಿಧಾನಸಭೆ): ತೆಲಂಗಾಣದ ನಂತರ ರಾಜ್ಯದಲ್ಲಿಯೂ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆಯುತ್ತಿದೆ.

ವಿಧಾನಸಭೆಯಲ್ಲಿ ಮಕ್ಕಳ ಜಾಲತಾಣ ಬಳಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಡಿಜಿಟಲ್ ಡಿಟಾಕ್ಸಿಫಿಕೇಶನ್ ಗೆ ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ಸಾಮಾಜಿಕ ಜಾಲತಾಣಗಳಿಂದ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಸಣ್ಣ ಮಕ್ಕಳು ಜಾಲತಾಣಗಳಲ್ಲಿ ಅನಗತ್ಯ ವಿಚಾರ ನೋಡುತ್ತಾ ಆಕರ್ಷಿತರಾಗುತ್ತಿದ್ದು, ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಸುರೇಶ್ ಕುಮಾರ್ ಅವರು ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಮಕ್ಕಳನ್ನು ಜಾಲತಾಣದಿಂದ ದೂರ ಇಡುವ ಬಗ್ಗೆ ಫಿನ್ಲೆಂಡ್, ಆಸ್ಟ್ರೇಲಿಯಾ, ಫ್ರಾನ್ಸ್ ಈಗಾಗಲೇ ನಿರ್ಧಾರ ಕೈಗೊಂಡಿವೆ. ನಾವು ಕೂಡ ಸಾಮಾಜಿಕ ಜಾಲತಾಣವನ್ನು ಯಾವ ರೀತಿ ಜವಾಬ್ದಾರಿಯುತ ಬಳಕೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತಿದ್ದೇನೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಜನತೆ ಸಾಮಾಜಿಕ ಜಾಲತಾಣದಲ್ಲಿ ಮುಳುಗುತ್ತಿರುವುದು ಆತಂಕಕಾರಿ. ಈಗಾಗಲೇ ಕೆಲವು ದೇಶಗಳಲ್ಲಿ ಸಾಮಾಜಿಕ ಮಾಧ್ಯಮ ಬಳಕೆಗೆ ಕಡಿವಾಣ ಹಾಕುವ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಾವು ಕೂಡ ಈ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತಿದ್ದೇವೆ. ಸೋಷಿಯಲ್ ಮೀಡಿಯಾದಿಂದ ಅವರನ್ನು ಹೊರತರಲು ಐಟಿಬಿಟಿ ಇಲಾಖೆಯು ಮೆಟಾ ಸಹಯೋಗದಲ್ಲಿ ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಹೆಚ್ಚು ಮಕ್ಕಳು, ಸುಮಾರು 1 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸಾಮಾಜಿಕ ಜಾಲತಾಣವನ್ನು ಅಗತ್ಯಗಿಂತ ಹೆಚ್ಚು ಬಳಸಿದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular