BIG NEWS : ರಾಜ್ಯದ ‘ಆಶಾ ಕಾರ್ಯಕರ್ತೆ’ಯರ ನಿವೃತ್ತಿ ವಯೋಮಿತಿ 60 ವರ್ಷಕ್ಕೆ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ 60 ವರ್ಷಕ್ಕೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ನಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ.
ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ತಂತ್ರಜ್ಞಾನ ಇತ್ಯಾದಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರ ಸ್ನಾನಗಳು ಮತ್ತು ಕರ್ತವ್ಯಗಳನ್ನು ತರ್ಕಬದ್ಧಗೊಳಿಸಲು (Rationalization) ಹೊಸ ನೀತಿ ನಿರೂಪಣೆ ರೂಪಿಸುವ ಅವಶ್ಯಕತೆಯಿರುತ್ತದೆ.

ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿಯವರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read