BIG NEWS : ರಾಜ್ಯದಲ್ಲಿ 6,407 ಕೋಟಿ ರೂ. ಬಂಡವಾಳ ಹೂಡಿಕೆ : 33,771 ಉದ್ಯೋಗಗಳ ಸೃಷ್ಟಿ

ಬೆಂಗಳೂರು :  ರಾಜ್ಯಾದ್ಯಂತ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ಹಾಗೂ ಉದ್ಯೋಗ ಸೃಷ್ಟಿಗೂ ಒತ್ತು ನೀಡಿ,  ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಿ ಒಟ್ಟು 128 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದ್ದು, 33,771 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಬೆಳಗಾವಿ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಉಗ್ರಾಣ, ಶೈತ್ಯಾಗಾರ, ವಾಹನಗಳ ಬಿಡಿಭಾಗ, ಪಿವಿಸಿ ಪೈಪ್ ಗಳ ತಯಾರಿಕೆ ಸೇರಿದಂತೆ ಹಲವಾರು ಉದ್ಯಮಗಳು ಸ್ಥಾಪನೆಯಾಗಲಿದ್ದು, ದುಡಿಯುವ ಕೈಗಳಿಗೆ ಉದ್ಯೋಗ ದೊರೆತು ಸಹಸ್ರಾರು ಕುಟುಂಬಗಳ ಬದುಕು ಹಸನಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read