HomeLatest NewsBIG NEWS: 7 ಸಾವಿರ ಕೋಟಿ ರೂ. ಬೆಗ್ಗರ್ಸ್ ಸೆಸ್ ಸಂಗ್ರಹ: 3 ಸಾವಿರ ಕೋಟಿ...

BIG NEWS: 7 ಸಾವಿರ ಕೋಟಿ ರೂ. ಬೆಗ್ಗರ್ಸ್ ಸೆಸ್ ಸಂಗ್ರಹ: 3 ಸಾವಿರ ಕೋಟಿ ಖರ್ಚಾದರೂ ನಿಲ್ಲದ ಮಕ್ಕಳ ಭಿಕ್ಷಾಟನೆ: ಏನೋ ಸರಿ ಇಲ್ಲ ಎಂದು ಹೈಕೋರ್ಟ್ ಕಳವಳ

ಬೆಂಗಳೂರು: ಕಳೆದ 4 ವರ್ಷಗಳಿಂದ 7093 ಕೋಟಿ ರೂಪಾಯಿ ಬೆಗ್ಗರ್ಸ್ ಸೆಸ್ ಅನ್ನು ರಾಜ್ಯ ಸರ್ಕಾರ ಸಂಗ್ರಹಿಸಿದೆ. ಆದರೂ ಕೂಡ ರಸ್ತೆಗಳಲ್ಲಿ ಮಕ್ಕಳ ಭಿಕ್ಷಾಟನೆ ಮುಂದುವರೆದಿದೆ.

ಈ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇದು ಏನೋ ಸರಿ ಇಲ್ಲ ಎನ್ನುವುದನ್ನು ಸೂಚಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ನಲ್ಲಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲಾಗಿದೆ.

7093 ಕೋಟಿ ರೂಪಾಯಿ ಸೆಸ್ ನಲ್ಲಿ 3453 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳು 3639 ಕೋಟಿ ರೂಪಾಯಿ ವರ್ಗಾಯಿಸಬೇಕಿದೆ ಎಂದು ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಸಾವಿರಾರು ಕೋಟಿ ರೂಪಾಯಿ ಹಣ ಖರ್ಚಾದರೂ ಮಕ್ಕಳ ಭಿಕ್ಷಾಟನೆ ನಿಂತಿಲ್ಲ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖರ್ಚಾದ ಹಣ ಮತ್ತು ಬಾಕಿ ಹಣದ ಲೆಕ್ಕ ನೀಡುವಂತೆ ಹೈಕೋರ್ಟ್ ಕೇಳಿದೆ. ಅಂಕಿ ಅಂಶ ಸಂಗ್ರಹಿಸಲು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಾಧಿಕಾರಕ್ಕೆ ಸಹಕರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ 8 ವಾರಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಮತ್ತು ಕೆ.ಎಸ್.ಎಲ್.ಎಸ್.ಎ.ಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular