HomeLatest NewsBIG NEWS: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ್ರೋಹಿ ಸಂಘಟನೆ RSS ನಿಷೇಧ: ಸಚಿವ ಪ್ರಿಯಾಂಕ್ ಖರ್ಗೆ

BIG NEWS: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ್ರೋಹಿ ಸಂಘಟನೆ RSS ನಿಷೇಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್.ಎಸ್.ಎಸ್. ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೆ ಒಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿರುವುದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಆರ್.ಎಸ್.ಎಸ್.ಗೆ ನಿಷೇಧ ಹೇರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವ ಸಂಘಟನೆ ಜಾತಿ, ಕೋಮು ಭಾವನೆಯನ್ನು ಪ್ರಚೋದಿಸುವುದೋ ಅದು ದೇಶದ್ರೋಹಿ ಸಂಘಟನೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ಆರ್.ಎಸ್.ಎಸ್. ಕಳೆದ 100 ವರ್ಷದಿಂದ ಕೋಮಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಮೂರು ಬಾರಿ ನಿಷೇಧ ಹೇರಲ್ಪಟ್ಟಿದ್ದ ಸಂಘಟನೆಯನ್ನು ಮತ್ತೆ ನಿಷೇಧಿಸಬೇಕು. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ನಾವು ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular