HomeLatest NewsBIG NEWS: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಪ್ರವಾಸ: S -400,...

BIG NEWS: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಪ್ರವಾಸ: S -400, ಸುಖೊಯ್ 57 ಯುದ್ಧ ವಿಮಾನ ಖರೀದಿ ಬಗ್ಗೆ ಮೋದಿ ಜತೆ ಚರ್ಚೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಅವರು ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ನಿಗದಿಯಾಗಿದೆ.

23ನೇ ಭಾರತ -ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಭೇಟಿಯ ವೇಳೆ ಉಭಯ ನಾಯಕರಿಂದ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಚರ್ಚೆಯ ವೇಳೆ ಉಭಯ ದೇಶಗಳ ಸಂಬಂಧ ಸುಧಾರಣೆಯ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಅದೇ ರೀತಿ ಎಸ್ -400, ಸುಖೊಯ್- 57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular