HomeLatest NewsBIG NEWS : ರಾಜ್ಯಾದ್ಯಂತ ಜೂ.9 ರಿಂದ 'ದ್ವಿತೀಯ PUC' ಪರೀಕ್ಷೆ-3 ಆರಂಭ : ವಿದ್ಯಾರ್ಥಿಗಳಿಗೆ...

BIG NEWS : ರಾಜ್ಯಾದ್ಯಂತ ಜೂ.9 ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್ 9 ರಿಂದ 20 ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ.

ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲನೆ ಕಡ್ಡಾಯ
1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಸಿಸಿ ಕ್ಯಾಮೆರಾ ಕಡ್ಡಾಯ : ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು

ವೇಳಾಪಟ್ಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 9: ಕನ್ನಡ / ಅರೇಬಿಕ್
ಜೂನ್ 10: ಇತಿಹಾಸ / ಭೌತಶಾಸ್ತ್ರ
ಜೂನ್ 11: ರಾಜ್ಯಶಾಸ್ತ್ರ/ ಸಂಖ್ಯಾಶಾಸ್ತ್ರ / ಜೀವಶಾಸ್ತ್ರ
ಜೂನ್ 12: ರಸಾಯನಶಾಸ್ತ್ರ/ ಅರ್ಥಶಾಸ್ತ್ರ
ಜೂನ್ 13: ಇಂಗ್ಲಿಷ್
ಜೂನ್ 14: ತರ್ಕಶಾಸ್ತ್ರ / ವ್ಯವಹಾರ ಅಧ್ಯಯನ / ಗಣಿತ / ಶಿಕ್ಷಣ ಶಾಸ್ತ್ರ / ಗೃಹವಿಜ್ಞಾನ
ಜೂನ್ 15/ ಭಾನುವಾರ ರಜೆ
ಜೂನ್ 16: ಸಮಾಜಶಾಸ್ತ್ರ / ಭೂಗರ್ಭಶಾಸ್ತ್ರ / ವಿದ್ಯುನ್ಮಾನ ಶಾಸ್ತ್ರ /ಗಣಕ ವಿಜ್ಞಾನ
ಜೂನ್ 17: ಐಚ್ಛಿಕ ಕನ್ನಡ /ಲೆಕ್ಕಶಾಸ್ತ್ರ
ಜೂನ್ 18: ಹಿಂದಿ
ಜೂನ್ 19: ಮನಃಶಾಸ್ತ್ರ / ಮೂಲ ಗಣಿತ/ ಭೂಗೋಳಶಾಸ್ತ್ರ
ಜೂನ್ 20: ತಮಿಳು/ ತೆಲುಗು/ಮಲಯಾಳಂ/ ಮರಾಠಿ/ ಉರ್ದು/ಸಂಸ್ಕೃತ/ ಫ್ರೆಂಚ್

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular