HomeKarnatakaBIG NEWS : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು : ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ಸಮುದಾಯಗಳ...

BIG NEWS : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು : ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಒತ್ತಾಯ

ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿದರು.

ವರದಿ ನೀಡಲು ಎರಡು ತಿಂಗಳ ಕಾಲಾವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು  ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರಿಗೆ ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular