BIG NEWS : ‘ಕಾವೇರಿ 2.0′ ವೆಬ್ ಸೈಟ್’ ನಲ್ಲಿ ಸರ್ವರ್ ಡೌ‍ನ್ : ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ.!

ಕಾವೇರಿ 2.0 ವೆಬ್ ಸೈಟ್ ನಲ್ಲಿ ಸರ್ವರ್ ಡೌ‍ನ್ ಆಗಿದ್ದು, ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತಗೊಂಡಿದೆ.

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಆನ್ಲೈನ್ನಲ್ಲಿ ಮಾತ್ರ ಮಾಡಲಾಗುತ್ತದೆ. ಕಾವೇರಿ 2.0 ಪೋರ್ಟಲ್ಗೆ ಸರ್ವರ್ ಡೌನ್ ಆಗಿದ್ದು, 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ನೋಂದಣಿಯ ಮೇಲೆ ಪರಿಣಾಮ ಬೀರಿದೆ.

ರಾಜ್ಯದಲ್ಲಿ ಪ್ರತಿದಿನ ಸರಾಸರಿ 7ರಿಂದ 8 ಸಾವಿರ ದಸ್ತಾವೇಜುಗಳು ನೋಂದಣಿಯಾಗುತ್ತಿತ್ತು. ಆದರೆ, ಶನಿವಾರದಿಂದ ಕಾವೇರಿ 2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿ ಸದ ಕಾರಣ ದಸ್ತಾವೇಜುಗಳ ನೋಂದಣಿ ಸಂಪೂರ್ಣ ಇಳಿಕೆಯಾಗಿದೆ. ಆಸ್ತಿ ನೋಂದಣಿಗೆ ಶನಿವಾರದಿಂದಲೂ ಸಬ್ ರಿಜಿಸ್ಟ್ರಾರ್ ಕಚೇರಿ ಗಳಲ್ಲಿ ಜನರು ಪರದಾಡುತ್ತಿದ್ದಾರೆ.

ಎಲ್ಲ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಸರ್ವರ್ ಸಮಸ್ಯೆಯಿಂದ ಜನರು ಹೈರಾಣಾಗಿದ್ದಾರೆ, ಇದಕ್ಕೆ ಕಾವೇರಿ 2.0 ತಂತ್ರಾಂಶದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ಕಾರಣ ಎನ್ನ ಲಾಗಿದ್ದು,ಮಂಗಳವಾರವೂ ಸಮಸ್ಯೆ ಮುಂದು ವರಿದಿದೆ. ಇ- ವಿಶೇಷವಾಗಿ ತನಿವಾರದಿಂದ ಸಿಟಿಜನ್ ಲಾಗಿನ್ ಮತ್ತು ಸಬ್ ರಿಜಿಸ್ಟ್ರಾರ್ ಲಾಗಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ದಸ್ತಾ ದೇಜುಗಳ ನೋಂದಣಿ ಪ್ರಕ್ರಿಯೆ ಬಹುತೇಕ ಸ್ತಬ್ಧವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read