ಭಾರತದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ಸಮಯದಲ್ಲಿ ನಿಷೇಧಿಸಲ್ಪಟ್ಟ ಕೆಲವು ಪಾಕಿಸ್ತಾನಿ ಸುದ್ದಿ ವೆಬ್ಸೈಟ್ಗಳು ಮತ್ತು ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ಮತ್ತೆ ಕಾಣಿಸಿಕೊಂಡಿವೆ.
ಸರ್ಕಾರದಿಂದ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಇಲ್ಲದ ಕಾರಣ ಆ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ.
ಮಾಧ್ಯಮಗಳ ಜೊತೆ ಮಾತನಾಡಿದ ಸರ್ಕಾರಿ ಮೂಲಗಳು “ನಿಯತಕಾಲಿಕ ಪರಿಶೀಲನೆಯ ನಂತರ, ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮರುಸ್ಥಾಪಿಸಲಾಗಿದೆ” ಆದರೆ ಹೆಚ್ಚಿನ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದರು. ಕೆಲವು ಸಾಮಾಜಿಕ ಜಾಲತಾಣಗಳಲ್ಲಿ 14,000 ಖಾತೆಗಳು ಇನ್ನೂ ನಿಷೇಧದಲ್ಲಿವೆ” ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
You Might Also Like
TAGGED:ಆಪರೇಷನ್ ಸಿಂಧೂರ್