HomeLatest NewsBIG NEWS: ಶಿವಮೊಗ್ಗ- ಹರಿಹರ ರೈಲು ಯೋಜನೆ ಸ್ಥಗಿತ: ರೈಲ್ವೆ ಸಚಿವರಿಂದ ಮಾಹಿತಿ

BIG NEWS: ಶಿವಮೊಗ್ಗ- ಹರಿಹರ ರೈಲು ಯೋಜನೆ ಸ್ಥಗಿತ: ರೈಲ್ವೆ ಸಚಿವರಿಂದ ಮಾಹಿತಿ

ನವದೆಹಲಿ: ಕರ್ನಾಟಕ ಸರ್ಕಾರವು ಉಚಿತವಾಗಿ ಭೂಮಿ ಮತ್ತು ಯೋಜನಾ ವೆಚ್ಚದ ಶೇಕಡ 50ರಷ್ಟು ಮೊತ್ತ ಭರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ -ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಬುಧವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು 79 ಕಿಲೋಮೀಟರ್ ಉದ್ದದ ಶಿವಮೊಗ್ಗ -ಹರಿಹರ ರೈಲು ಮಾರ್ಗಕ್ಕೆ 832 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈ ಯೋಜನೆಗಾಗಿ ಅನುಮೋದನೆ ನೀಡಲಾಗಿತ್ತು. ಆದರೆ ಯೋಜನೆಗೆ ಅಗತ್ಯವಾದ 488 ಹೆಕ್ಟೇರ್ ಜಾಗವನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡು ಉಚಿತವಾಗಿ ಹಸ್ತಾಂತರಿಸಬೇಕು. ಯೋಜನಾ ಮೊತ್ತದ ಶೇಕಡ 50ರಷ್ಟು ವೆಚ್ಚ ಭರಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈಗ ರಾಜ್ಯ ಸರ್ಕಾರ ಈ ಒಪ್ಪಂದದಿಂದ ಹಿಂದಕ್ಕೆ ಸರಿದಿರುವುದರಿಂದ ಶಿವಮೊಗ್ಗ -ಹರಿಹರ ನಡುವಿನ ರೈಲು ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular